ಬೆಂಗಳೂರು(13-11-2020): ಖ್ಯಾತ ಪತ್ರಕರ್ತ, ಬರಹಗಾರ, ಹಾಯ್ ಬೆಂಗಳೂರ್ ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಇಂದು ನಿಧನರಾಗಿದ್ದಾರೆ.
62 ವರ್ಷದ ರವಿ ಬೆಳಗೆರೆ ತಡರಾತ್ರಿ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ತಕ್ಷಣ ಆಸ್ಪತ್ರೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಇವರು ಪತ್ನಿಯರಾದ ಲಲಿತಾ, ಯಶೋಮತಿ, ಮಕ್ಕಳಾದ ಚೇತನಾ, ಭಾವನಾ, ಕರ್ಣ ಹಾಗೂ ಹಿಮವಂತ ಸೇರಿ ಅಪಾರ ಬಂಧು-ಬಳಗ ಅಭಿಮಾನಿಗಳನ್ನೂ ಅಗಲಿದ್ದಾರೆ.