ಬೆಂಗಳೂರು(17/11/2020): ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಮುಂಬೈನಲ್ಲಿ ನಡೆದಿದ್ದ ಬಿಲ್ಡರ್ ರಾಜು ಪಾಟೀಲ ಹತ್ಯೆ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರವಿದ್ದು, ಆತನನ್ನು ಕಸ್ಟಡಿಗೆ ನೀಡಿ’ ಎಂದು ಮುಂಬೈ ಪೊಲೀಸರು, 62ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ನ್ಯಾಯಾಲಯ, ರವಿ ಪೂಜಾರಿಯನ್ನು ಮುಂದಿನ 10 ದಿನಗಳ ಕಾಲ ಮುಂಬೈ ಪೊಲೀಸರ ಕಸ್ಟಡಿಗೆ ನೀಡಿದೆ
ರವಿ ಪೂಜಾರಿ ಸೆನೆಗಲ್ನಲ್ಲಿ ಕರ್ನಾಟಕ ಪೊಲೀಸರ ಜೈಗೆ ಸಿಕ್ಕಿಬಿದ್ದಿದ್ದನು. ಹತ್ಯೆ, ಹತ್ಯಾ ಯತ್ನ, ಕೊಲೆ ಬೆದರಿಕೆ ಸೇರಿದಂತೆ ವಿವಿಧ ಪ್ರಕರಣಗಳು ಈತನ ಮೇಲೆ ದಾಖಲಾಗಿದೆ.