ಬೆಳಗಾವಿ(14-10-2020): ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ 1.49 ಕೋಟಿ ಕೋವಿಡ್-19 ನಿರ್ವಹಣೆಗೆ ಬಿಡುಗಡೆ ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆ ನಡೆಯುತ್ತಿದೆ.
ರಾಯಬಾಗ ತಾಲ್ಲೂಕಿನ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ವಿಧಾನಮಂಡಲ ಅಧಿವೇಶನದಲ್ಲಿ1.49 ಕೋಟಿ ಅನುದಾನವನ್ನು ತಹಶೀಲ್ದಾರ್ ಸ್ವಂತ ಖಾತೆಗೆ ವರ್ಗಾಯಿಸಿಕೊಂಡು ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಚಿಕ್ಕೋಡಿ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ತಂಡವನ್ನು ರಚಿಸಿದ್ದರು. ಈ ತಂಡ ಈ ಕುರಿತು ವಿಚಾರಣೆ ಆರಂಭಿಸಿದೆ.
ಆದರೆ ತಹಶೀಲ್ದಾರ್ ಭಜಂತ್ರಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದು, ಎಲ್ಲಾ ರೀತಿಯ ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ.