ಉತ್ತರ ಪ್ರದೇಶ(29-11-2020): ಬಲವಂತದ ಅಥವಾ ಮೋಸದ ಧಾರ್ಮಿಕ ಮತಾಂತರಗಳನ್ನು ತಡೆಯುವ ಉತ್ತರ ಪ್ರದೇಶದ ಸುಗ್ರೀವಾಜ್ಞೆಗೆ ನಿನ್ನೆ ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರ ಒಪ್ಪಿಗೆಯನ್ನು ಪಡೆದ ನಂತರ ಕಾನೂನಾಗಿ ಮಾರ್ಪಟ್ಟಿದೆ. ಇಂದು ನೂತನ ಕಾನೂನಿನಡಿಯಲ್ಲಿ ಬರೇಲಿಯ ಡಿಯೋರೇನಿಯಾ ಪೊಲೀಸ್ ಠಾಣೆಯಲ್ಲಿ ಮೊದಲ ಕೇಸ್ ದಾಖಲಾಗಿದೆ.
ಮಹಿಳೆಯನ್ನು ಇಸ್ಲಾಂಗೆ ಮತಾಂತರಗೊಳಿಸಲು ಒತ್ತಾಯಿಸಿದ ಆರೋಪದ ಮೇಲೆ ಉಬೈಸ್ ಎಂಬ ಯುವಕನ ವಿರುದ್ಧ ಕೇಸ್ ದಾಖಲಾಗಿದೆ. ಈತ ತನ್ನನ್ನು ಮತಾಂತರವಾಗುವಂತೆ ಒತ್ತಡ ಹೇರಿದ್ದಾನೆಂದು ಮಹಿಳೆ ಆರೋಪಿಸಿದ್ದಾಳೆ.
ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಯುಪಿ ಕಾನೂನುಬಾಹಿರ ಧರ್ಮ ಪರಿವರ್ತನೆ ಆರ್ಡಿನೆನ್ಸ್ 2020ಕ್ಕೆ ನಿನ್ನೆ ಸಹಿ ಹಾಕಿದ್ದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ನವೆಂಬರ್ 24 ರಂದು ಸುಗ್ರೀವಾಜ್ಞೆಯನ್ನು ಹೊರಡಿಸಿದ ನಂತರ, “ಮತಾಂತರಕ್ಕೆ” ಸಂಬಂಧಿತ ಅಪರಾಧಗಳಿಗೆ ಗರಿಷ್ಠ 10 ವರ್ಷಗಳ ಶಿಕ್ಷೆಯನ್ನು ಕಾನೂನಿನಲ್ಲಿ ಉಲ್ಲೇಖಿಸಿದೆ.