ರೆಮ್‌ಡೆಸಿವಿರ್ ಹಾಗೂ ಆಕ್ಸಿಜನ್ ಸಿಲಿಂಡರ್ ಅಕ್ರಮವಾಗಿ ಸಂಗ್ರಹಿಸುವವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕೇಸ್ : ಸಿಎಂ ಎಮ್.ಕೆ.ಸ್ಟಾಲಿನ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಚೆನ್ನೈ: ರಾಜ್ಯದಲ್ಲಿ ರೆಮ್‌ಡೆಸಿವಿರ್ ಹಾಗೂ ಆಕ್ಸಿಜನ್ ಸಿಲಿಂಡರ್ ಅಕ್ರಮವಾಗಿ ಸಂಗ್ರಹಿಸುವವರ ವಿರುದ್ಧ ಗೂಂಡಾ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ಎರಡನೇ ಅಲೆಯ ಸಂಕಷ್ಟದ ಪರಿಸ್ಥಿತಿಯಲ್ಲಿ ರೆಮ್‌ಡೆಸಿವಿರ್ ಮತ್ತು ಆಕ್ಸಿಜನ್ ಸಿಲಿಂಡರ್‌ ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುವ ಬಗ್ಗೆ ವರದಿಗಳು ಕೇಳಿ ಬಂದಿವೆ, ರೆಮ್‌ಡೆಸಿವಿರ್, ಆಕ್ಸಿಜನ್ ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟುಕೊಂಡವರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಶನಿವಾರ ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆ.

ಈ ಕುರಿತು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿರುವ ಮುಖ್ಯಮಂತ್ರಿ ಸ್ಟಾಲಿನ್, ಕೊರೊನಾ ವೈರಸ್ ಸೋಂಕಿನಿಂದ ಜನರ ಪ್ರಾಣ ರಕ್ಷಿಸುವುದು ರಾಜ್ಯ ಸರ್ಕಾರದ ಮೊದಲ ಜವಾಬ್ದಾರಿಯಾಗಿದ್ದು, ರೆಮ್‌ಡೆಸಿವಿರ್, ಆಮ್ಲಜನಕ ಸಿಲಿಂಡರ್‌ ಸಂಗ್ರಹಿಸಿ ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸುವಂತೆ ಸೂಚಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು