ಮುಂಬೈ(10/10/2020): ಟಿಆರ್ ಪಿ ವಂಚನೆಯ ವಿರುದ್ಧ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ವಿರುದ್ಧ ಕೋರ್ಟ್ ಮೆಟ್ಟಿಲೇರಿರುವ ರಿಪಬ್ಲಿಕ್ ವಾಹಿನಿ, ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿರುವುದಾಗಿ ಹೇಳಿದೆ.
ಕೋರ್ಟ್ ತೀರ್ಪು ಪ್ರಕಟವಾಗುವವರೆಗೆ ತನಿಖೆಯನ್ನು ಸ್ಥಗಿತಗೊಳಿಸಬೇಕೆಂದು ಮುಂಬೈ ಪೊಲೀಸ್ ಅಧಿಕಾರಿಗೆ ಪತ್ರ ಬರೆದಿರುವುದಾಗಿ ರಿಪಬ್ಲಿಕ್ ಟಿವಿಯ ಹಣಕಾಸು ವಿಭಾಗದ ಮುಖ್ಯಸ್ಥ ಶಿವ ಸುಂದರಂ ಹೇಳಿದ್ದಾರೆ.
ಆರ್ಟಿಕಲ್ 32ರಂತೆ ಪ್ರಕರಣದ ರಿಟ್ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದೇವೆ. ಮುಂದಿನ ವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ ಎಂಬ ನಿರೀಕ್ಷೆ ಇದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವವರೆಗೆ ಸ್ಥಗಿತಗೊಳಿಸಬೇಕು ಎಂದು ಅವರು ಆಗ್ರಹಿಸಿದರು.