ಸ್ಥಳೀಯ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು ಮೀಸಲಾತಿ ಅಸ್ತ್ರ ದುರ್ಬಳಕೆ! ಬಿಜೆಪಿ ವಿರುದ್ಧ ಗಂಭೀರ ಆರೋಪ

reservation
Share on facebook
Share on twitter
Share on linkedin
Share on whatsapp
Share on telegram
Share on email
Share on print

ಹಾಸನ(22-10-2020): ಬಿಜೆಪಿ ಸರ್ಕಾರ ರಾಜ್ಯದ 48 ಸ್ಥಳೀಯ ಸಂಸ್ಥೆಗಳನ್ನು ವಶಕ್ಕೆ ಪಡೆಯಲು ಮೀಸಲಾತಿ ಅಸ್ತ್ರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಮತ್ತು ವಾಮಮಾರ್ಗವನ್ನು ಅನುಸರಿಸುತ್ತಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆರೋಪಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಹೆಚ್. ಡಿ. ರೇವಣ್ಣ, ಬಿಜೆಪಿ ಮುಖಂಡರು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮೀಸಲಾತಿ ಅಸ್ತ್ರವನ್ನು ಬಳಸಿ ಹಿಂಬಾಗಿಲ ಮೂಲಕ ಸ್ಥಳೀಯ ಸಂಸ್ಥೆಗಳ ಅಧಿಕಾರ ಹಿಡಿಯುತ್ತಿದ್ದಾರೆ. ಈಗೆ ಮಾಡುವುದಾದರೆ ಚುನಾವಣೆ ಮಾಡುವ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಸರಕಾರ ಭ್ರಷ್ಟ ಹಾಗೂ ಲೂಟಿಕೋರ ಸರ್ಕಾರವಾಗಿದ್ದು, ಅಧಿಕಾರಿಗಳು ಇವರಿಗೆ ಸಾಥ್ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಅದೋಗತಿಗೆ ಹೋಗುತ್ತದೆ ಎಂದು ಹೇಳಿದ್ದಾರೆ .

 ನಗರಸಭೆ ಮೀಸಲಾತಿ ವಿಚಾರದ ಬಗ್ಗೆ ಅಡ್ವೊಕೇಟ್ ಜನರಲ್ ದಿನನಿತ್ಯ ವಿಭಿನ್ನ ಆದೇಶ ಪ್ರತಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸುತ್ತಿದ್ದಾರೆ. ಸಂಪೂರ್ಣ ಆದೇಶ ಪ್ರತಿ ಕೊಡುವಂತೆ ಕೇಳಿದರೆ ನೀಡುತ್ತಿಲ್ಲ ಎಂದು ರೇವಣ್ಣ ಆರೋಪಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು