ಪಂಜಾಬ್(15-10-2020): ಪಂಜಾಬ್ ಸರ್ಕಾರ ನಾಗರಿಕ ಸೇವೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಗೆ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಮಹಿಳೆಯರನ್ನು ಮತ್ತಷ್ಟು ಸಬಲೀಕರಣಗೊಳಿಸುವ ಸಲುವಾಗಿ ಪಂಜಾಬ್ ಸರ್ಕಾರ ಸರ್ಕಾರಿ ಉದ್ಯೋಗಗಳಲ್ಲಿ ಶೇ.33 ರಷ್ಟು ಮೀಸಲಾತಿಯನ್ನು ನೀಡುತ್ತಿದೆ. ಇದು ಪಂಜಾಬ್ ರಾಜ್ಯ ನಾಗರಿಕ ಸೇವೆಗಳ ನೇರನೇಮಕಾತಿಗೆ ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ.
ದೇಶದ ಇತಿಹಾಸದಲ್ಲೇ ಪಂಜಾಬ್ ಸರ್ಕಾರದ ನಿರ್ಧಾರ ಐತಿಹಾಸಿಕ ನಿರ್ಧಾರವಾಗಿದೆ. ಮಹಿಳಾ ಸಬಲೀಕರಣಕ್ಕೆ ಕೈಗೊಂಡ ಮಹತ್ವದ ನಿರ್ಧಾರವಾಗಿದೆ.