ನಟಿ, ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ; ಭಾರೀ ಪ್ರಮಾಣದ ಚಿನ್ನಾಭರಣ ಕಳ್ಳತನವಾಗಿರುವ ಶಂಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಬಾಗಲಕೋಟೆ(02/11/2020): ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ವಸ್ತುಗಳು ಕಳ್ಳರು ಲಪಟಾಯಿಸಿದ್ದಾರೆ ಎನ್ನಲಾಗಿದೆ.

ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮನೆ ಕಳ್ಳತನ ನಡೆದಿದೆ. ಮನೆಯ ಬಾಗಿಲು ಮುರಿದು, ಅಪಾರ ಪ್ರಮಾಣದ ವಸ್ತು ಮತ್ತು ಹಣ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ.

ರಾತ್ರಿ 2 ಗಂಟೆ ನಂತರ ಕಳ್ಳತನ ನಡೆದಿದ್ದು, ಒಬ್ಬನೇ ಬಂದಿದ್ದ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಲ್ಲದೆ ಅಪಾರ ಪ್ರಮಾಣದ ಚಿನ್ನಾಭರಣ, ವಸ್ತುಗಳು ಕಳ್ಳತನವಾಗಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಬಳಿಕ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು