ಬೆಂಗಳೂರು(30-11-2020): ಅನಾರೋಗ್ಯದಿಂದ ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ.
ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ.
ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ರೋಷನ್ ಬೇಗ್ ಅವರನ್ನು ನ. 28 ರವರೆಗೆ ಮೂರು ದಿನಗಳ ಕಾಲ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿತ್ತು. ಆದರೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಾಳೆ ಮತ್ತೆ ಅವರನ್ನು ಹೆಚ್ಚಿನ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಐಎಂಎ ಕಿಂಗ್ ಪಿನ್ ಮನ್ಸೂರ್ ಅಲಿಖಾನ್ ಅವರಿಂದ ಕೋಟ್ಯಾಂತರ ರೂ. ಸಾಲ ಪಡೆದು ವಂಚಿಸಿದ ಆರೋಪ ರೋಷನ್ ಬೇಗ್ ಮೇಲಿದೆ.