ಸಾರಿಗೆ ನೌಕರರ ಮುಷ್ಕರ : ಆರನೇ ವೇತನ ನೀಡಲು ಸಾಧ್ಯವಿಲ್ಲ – ಸಿಎಂ ಯಡಿಯೂರಪ್ಪ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಳಗಾವಿ: ಆರನೇ ವೇತನ ಆಯೋಗದ ವರದಿಯಂತೆ ಸಾರಿಗೆ ಸಂಸ್ಥೆ ನೌಕರರಿಗೆ ವೇತನ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಸಾರಿಗೆ ಸಂಸ್ಥೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಕೋವಿಡ್‌ ಆರ್ಥಿಕ ಸಂಕಷ್ಟದಲ್ಲೂ ಸಂಬಳ ನೀಡಿದ್ದೇವೆ. ವೇತನಕ್ಕಾಗಿಯೇ 1,200 ಕೋಟಿಯನ್ನು ಸಾರಿಗೆ ಇಲಾಖೆಗೆ ಕೊಟ್ಟಿದ್ದೇವೆ. ಇಷ್ಟಾದ ಮೇಲೂ ಅವರ ಹಟ ಸರಿಯಲ್ಲ. ಮುಷ್ಕರ ಮುಂದುವರಿಸಿದರೆ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ ಹಟ ಬಿಡಿ ಎಂದು ನೌಕರರಿಗೆ ಕೋರಿದ್ದಾರೆ.

ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ಖಾಸಗಿ ಬಸ್‌ಗಳ ಸಂಚಾರ ನಡೆಯಲಿದೆ. ನೌಕರರು ಮುಷ್ಕರ ಹಿಂಪಡೆದು ಚರ್ಚೆಗೆ ಬರಲಿ ಎಂದು ಹೇಳಿದ್ದಾರೆ.
ಶೇ.8ರಷ್ಟು ವೇತನ ಹೆಚ್ಚಳಕ್ಕೆ ಯೋಜನೆ ರೂಪಿಸಿದ್ದು, ಅದನ್ನು ಕೊಡಲು ಸಿದ್ಧ, ನಮ್ಮ ಮಾತನ್ನು ಕೇಳಿ ಮುಷ್ಕರ ವಾಪಸ್ ಪಡೆಯುತ್ತಾರೋ ಇಲ್ಲವೇ ಎಂಬುದು ಕಾದು ನೋಡಬೇಕಿದೆ ಎಂದು ಸಿಎಂ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು