ಸಚಿವರ ಒಂದು ವರ್ಷದ ವೇತನ ‘ಕೋವಿಡ್ ಪರಿಹಾರ ನಿಧಿಗೆ’ ನೀಡುವಂತೆ ಸಿಎಂ ಆದೇಶ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೊರೊನಾ ಎರಡನೇ ಅಲೆಯ ತೀವ್ರತೆ ಮಿತಿ ಮೀರುತ್ತಿದೆ. ಅನೇಕ ಕಡೆಗಳಲ್ಲಿ ಬೆಡ್, ಆಕ್ಸಿಜನ್ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗುತ್ತಿವೆ, ಕೋವಿಡ್ ನಿರ್ವಹಣೆಗಾಗಿ ಸರ್ಕಾರ ಎಷ್ಟೇ ಪ್ರಯತ್ನ ಮಾಡಿದರೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ನಿಯಂತ್ರಣಕ್ಕೆ ಅನುಕೂಲವಾಗುವಂತೆ ರಾಜ್ಯದ ಸಚಿವ ಸಂಪುಟದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೊವಿಡ್ -19 ಪರಿಹಾರ ನಿಧಿಗೆ ದೇಣಿಗೆಗಾಗಿ ಪಾವತಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ರಾಜ್ಯದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಮೇ 1 ರಿಂದ ಅನ್ವಯವಾಗುವಂತೆ ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.

ಏಪ್ರಿಲ್ 29ರಂದು ಬಿ.ಎಸ್.ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಸಚಿವರ ಒಂದು ವರ್ಷದ ವೇತನವನ್ನು ಕೊವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಸಲಹೆ ನೀಡಿದ್ದರು. ಇಂದು ಪ್ರಕಟಣೆ ಮೂಲಕ ಬಿಎಸ್ ವೈ ಆದೇಶ ಹೊರಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು