ಸರಕಾರದ ನಿರ್ಧಾರದಲ್ಲಿ ದಿಢೀರ್ ಬದಲಾವಣೆ | ಅಗತ್ಯ ಸೇವೆಗಳ ಹೊರತಾಗಿ ರಾಜ್ಯದಲ್ಲಿ ಎಲ್ಲವೂ ಲಾಕ್!

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಅತ್ಯಗತ್ಯ ಸೇವೆಗಳ ಹೊರತಾಗಿ ರಾಜ್ಯದಲ್ಲಿ ಎಲ್ಲವೂ ಲಾಕ್ಡೌನ್ ಆಗಲಿದೆ. ಎಪ್ರಿಲ್ ಮೇ 4 ವರೆಗೆ ಇದು ರಾಜ್ಯಾದ್ಯಂತ ಅನ್ವಯಿಸಲಿದೆ.

ಹಿನ್ನೆಲೆಯಲ್ಲಿ ಪೋಲೀಸರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ. ಲಾಕ್ಡೌನ್ ನಿಯಮಗಳನ್ನು ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಅಲ್ಲಲ್ಲಿ ಕೆಲವು ವ್ಯಾಪಾರಿಗಳು ಪೋಲೀಸರ ಜೊತೆ ವಾಗ್ಚಾದದಲ್ಲಿ ತೊಡಗಿರುವುದು ಕಂಡು ಬರುತ್ತಿದೆ.

ಮಠ, ಮಂದಿರ, ಮಸೀದಿ, ಚರ್ಚುಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋರೂಮ್, ಬ್ಯಾಂಗಲ್ಸ್ ಸ್ಟೋರ್, ಚಿನ್ನದ ಅಂಗಡಿ ಬುಕ್ ಶಾಪ್, ಚಪ್ಪಲಿ ಅಂಗಡಿಗಳು, ಫ್ಯಾನ್ಸಿ ಸ್ಟೋರ್, ಬಟ್ಟೆ ಅಂಗಡಿಗಳು ಸೇರಿ ಎಲ್ಲವನ್ನೂ ಪೋಲೀಸರು ಬಂದ್ ಮಾಡಿಸುತ್ತಿದ್ದಾರೆ.

ಹೋಟೆಲ್ , ರೆಸ್ಟೋರೆಂಟ್, ಬಾರ್ ಗಳಿಂದ ಪಾರ್ಸಲ್ ತರಬಹುದಾಗಿದೆ. ಆದರೆ ಅಲ್ಲಿ ಕೂತು ತಿನ್ನಲು ಅವಕಾಶವಿಲ್ಲ. ಆಟೋ, ಬಸ್, ಮೆಟ್ರೋ ಸೇವೆಗಳು ಲಭ್ಯವಾಗಲಿದೆ.

ಬ್ಯಾಂಕ್, ಎಟಿಎಂ, ಇನ್ಶ್ಯೂರೆನ್ಸ್  ಸಂಸ್ಥೆಗಳು, ಪತ್ರಿಕೆ, ಟಿವಿ ಸೇರಿದಂತೆ ಮಾಧ್ಯಮ ಸಂಸ್ಥೆಗಳು, ಕಾಮರ್ಸ್ ಸೇವೆಗಳು, ಖಾಸಗಿ ಸೆಕ್ಯೂರಿಟಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ತೆರೆಯಲು ಅವಕಾಶವಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು