ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಮಾರ್ಟ್ ಫೋನ್ ವಿತರಣೆ: ಶಿಕ್ಷಣ ಸಚಿವ ಸುರೇಶಕುಮಾರ್ ಮಾಹಿತಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮೈಸೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ‘ಉಚಿತ ಸ್ಮಾರ್ಟ್‌ಫೋನ್’ ವಿತರಣೆ ಮಾಡುವ ಕುರಿತು ಈಗಾಗಲೇ ಸರ್ವೇ ಕಾರ್ಯವನ್ನು ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳ್ಳಿಗಳ‌ ಬಡ ವಿದ್ಯಾರ್ಥಿಗಳು ಆನ್‌ಲೈನ್ ಶಿಕ್ಷಣದಿಂದ ವಂಚಿತರಾಗಬಾರದು. ಮುಂದಿನ ಶೈಕ್ಷಣಿಕ ವರ್ಷ ಹೇಗಿರುತ್ತದೋ ಗೊತ್ತಿಲ್ಲ. ಹಳ್ಳಿಯ ಬಡ ಮಕ್ಕಳಿಗೆ ಸ್ಮಾರ್ಟ್ ಫೋನ್ ಖರೀದಿಸುವ ಆರ್ಥಿಕ ಸಾಮರ್ಥ್ಯ ಇಲ್ಲ, ಹೀಗಾಗಿ ಶಿಕ್ಷಣದಿಂದ ವಂಚಿತ ಮಕ್ಕಳಿಗೆ ಬಾಲ್ಯ ವಿವಾಹ ಆಗಬಾರದು. ಶಿಕ್ಷಣ ವಂಚಿತ ಮಕ್ಕಳು ಬಾಲ ಕಾರ್ಮಿಕರಾಗಬಾರದು. ಇವತ್ತು ಆನ್‌ಲೈನ್ ಶಿಕ್ಷಣಕ್ಕೆ ಸ್ಮಾರ್ಟ್‌ಫೋನ್ ಅಗತ್ಯವಾಗಿದೆ ಎಂದಿದ್ದಾರೆ.

ಮಕ್ಕಳ ಹಾಜರಾತಿ,‌ ಸ್ಮಾರ್ಟ್‌ ಫೋನ್ ಅಗತ್ಯತೆ ಬಗ್ಗೆ ವರದಿ ನೀಡಲು ಎಲ್ಲಾ ಜಿಲ್ಲೆಗಳ ಡಿಡಿಪಿಐಗಳಿಗೆ ಸೂಚನೆ ನೀಡಿದ್ದೇನೆ. ಈಗ ಎಂಟು ತಿಂಗಳು, ವರ್ಷಕ್ಕೆ ಒಮ್ಮೆ ಫೋನ್ ಬದಲಾಯಿಸುವುದು ಟ್ರೆಂಡ್ ಆಗಿದೆ. ವಿವಿಧ ಸಂಘ ಸಂಸ್ಥೆಗಳ ನೆರವಿನೊಂದಿಗೆ ಸ್ಮಾರ್ಟ್‌ ಫೋನ್ ಬ್ಯಾಂಕ್‌ ಮಾಡಬಹುದಾ? ಎಂಬುದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ಎಸ್.ಸುರೇಶ್‌ಕುಮಾರ್ ಅವರು ವಿವರಿಸಿದ್ದಾರೆ.

ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪರೀಕ್ಷೆ ನಡೆಯುತ್ತಾ..?
ಎನ್ನುವ ಚರ್ಚೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕಳೆದ ಭಾರಿಯೂ ಇದೇ ರೀತಿ ಪರ ವಿರೋಧ ಚರ್ಚೆ ಕೇಳಿ ಬಂದಿತ್ತು. ಆದರೆ ಶೇ.98 ರಷ್ಟು ಮಕ್ಕಳು ಪರೀಕ್ಷೆಗೆ ಹಾಜರಾಗಿದ್ರು. ಇಡೀ ದೇಶವೇ ನೋಡುವಂತೆ ಎಲ್ಲ ಸುವ್ಯವಸ್ಥೆಯಿಂದ ಪರೀಕ್ಷೆ ನಡೆಸಿದ್ದೇವು . ಈ ಬಾರಿಯೂ ಪರೀಕ್ಷೆ ನಡೆಸುವ ಸಂಬಂಧ ಮಾಜಿ ಶಿಕ್ಷಣ ಸಚಿವರು, ಪರಿಷತ್ ಸದಸ್ಯರು, ಶಿಕ್ಷಣ ತಜ್ಞರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಕಳೆದ ವರ್ಷ ನಡೆದಂತೆ ಈ ವರ್ಷವೂ ಜುಲೈನಲ್ಲಿ ಪರೀಕ್ಷೆ ನಡೆಸುವ ಚಿಂತನೆ ಇದೆ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಸೂಕ್ತ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು