ಎಲ್ಲಾ ಭಾರತೀಯರಿಗೂ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು- ಕೇಂದ್ರ ಸಚಿವ

prathap saranggi
Share on facebook
Share on twitter
Share on linkedin
Share on whatsapp
Share on telegram
Share on email
Share on print

ಒಡಿಶಾ(26-10-2020): ಕೋವಿಡ್ ಲಸಿಕೆಯನ್ನು ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಕೇಂದ್ರ ಸಚಿವ ಪ್ರತಾಪ್ ಸಾರಂಗಿ ದೇಶದ ಎಲ್ಲಾ ಪ್ರಜೆಗಳಿಗೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದ್ದಾರೆ.

ಒಡಿಶಾದಲ್ಲಿ ಸಚಿವ ಪ್ರತಾಪ್ ಸಾರಂಗಿ ಮಾತನಾಡಿ, ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುವುದು. ಇದಕ್ಕಾಗಿ 500ರೂ.ಗಳನ್ನು ಖರ್ಚು ಮಾಡಲಾಗುವುದು ಎಂದು ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಿಹಾರದಲ್ಲಿ ಗೆದ್ದರೆ ಉಚಿತ ಕೋವಿಡ್ ಲಸಿಕೆ ನೀಡುವುದಾಗಿ ಘೋಷಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಸರ್ಕಾರಗಳು ತಮ್ಮ ರಾಜ್ಯಗಳ ಜನತೆಗೆ ಉಚಿತವಾಗಿ ಕೋವಿಡ್ ಲಸಿಕೆ ಘೋಷಿಸಿದ್ದವು.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು