ಸಾರಿಗೆ ನೌಕರರನ್ನು ಮಾತುಕತೆಗೆ ಕರೆದು ಬಿಕ್ಕಟ್ಟು ಪರಿಹರಿಸಲಿ: ಸಿಎಂಗೆ ಸಿದ್ದರಾಮಯ್ಯ ಒತ್ತಾಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರವನ್ನು ಬಿಜೆಪಿ ಸರ್ಕಾರ ಪೊಲೀಸ್ ಬಲದ ಮೂಲಕ ದಮನಿಸಲು ಹೊರಟಿರುವುದು ಖಂಡನೀಯ. ಇದು ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ ಅಮಾನವೀಯ ನಡೆಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

6ನೇ ವೇತನ ನೀಡಬೇಕೆಂದು ಸಾರಿಗೆ ನೌಕರರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

ರಾಜ್ಯದ ಬಹಳ‌ ಕಡೆಗಳಲ್ಲಿ ಬಿಜೆಪಿ ಸರ್ಕಾರ ಮುಷ್ಕರ ನಿರತ ಕೆಎಸ್‌ಆರ್‌ಟಿಸಿ ನೌಕರರನ್ನು ವಾರಂಟ್ ಇಲ್ಲದೆ ಬಂಧಿಸುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರ್ನಾಟಕವನ್ನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆಯೇ? ಎಂದು ಪ್ರಶ್ನಿಸಿದರು.

ಅಕ್ರಮವಾಗಿ ವರ್ಗಾವಣೆ, ಅಮಾನತು ಮತ್ತು
ಮನೆ ಖಾಲಿ‌ಮಾಡಿಸುವ ಮೂಲಕ ಮುಷ್ಕರ ನಿರತ ಕೆಎಸ್‌ಆರ್‌ಟಿಸಿ ನೌಕರರನ್ನು ಮುಖ್ಯಮಂತ್ರಿಗಳು ಬೆದರಿಸಲು ಹೊರಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಮುಖ್ಯಮಂತ್ರಿಗಳು ಹಠಕ್ಕೆ ಬೀಳದೆ ತಕ್ಷಣ ಮುಷ್ಕರ ನಿರತ ಕೆಎಸ್‌ಆರ್‌ಟಿಸಿ ನೌಕರರನ್ನು ಮಾತುಕತೆಗೆ ಕರೆದು ಈಗಿನ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು