ಸಾರಿಗೆ ನೌಕರರಿಗೆ 6ನೇ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ: ಮುಷ್ಕರ ಕೈಬಿಡುವಂತೆ ಸಿಎಂ ವಿನಂತಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ರಾಜ್ಯದ ಒಟ್ಟು ಆದಾಯದ ಶೇ. 85 ರಷ್ಟು, ವೇತನ, ಭತ್ಯೆ, ಪಿಂಚಣಿ ಮತ್ತಿತರ ಯೋಜನೇತರ ವೆಚ್ಚಗಳಿಗೆ ವ್ಯಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಲ್ಪ ಆದಾಯ ಲಭ್ಯವಿರುತ್ತದೆ.

ಬಜೆಟ್ ಅಧಿವೇಶನದಲ್ಲಿ ವಿಪಕ್ಷ ನಾಯಕರು ಪ್ರಸ್ತಾಪಿಸಿದ್ದಂತೆ, ಯೋಜನೇತರ ವೆಚ್ಚ ಈಗಾಗಲೇ ಅಧಿಕವಾಗಿದೆ. ಪ್ರಸಕ್ತ ಸಂದರ್ಭಗಳಲ್ಲಿ ಮತ್ತಷ್ಟು ಹೆಚ್ಚು ಅನುದಾನವನ್ನು ಯೋಜನೇತರ ವೆಚ್ಚಗಳಿಗೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೌಕರರು ಬಸ್ ಬಂದ್ ಇವೆ. ಇದರಿಂದ ಪ್ರಯಾಣಿಕರಿಗೆ ತೀರ ತೊಂದರೆ ಅನುಭವಿಸುತ್ತಿದ್ದಾರೆ. ಇಂಥ ಸಂಕಷ್ಟದ ಕಾಲದಲ್ಲಿ ನೌಕರರು ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಸಿಎಂ ಹೇಳಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸಾರಿಗೆ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಅವರಿಗೆ ವೇತನ ನೀಡಲು, ಸರ್ಕಾರ 2,300 ಕೋಟಿ ರೂ. ಗಳ ಅನುದಾನ ನೀಡಿದೆ. ಸವಾಲಿನ ಸಂದರ್ಭಗಳಲ್ಲಿಯೂ ಸಹ ಸಾರಿಗೆ ಸಂಸ್ಥೆಗಳ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿನಂತಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು