ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ನಗರ ಸ್ಥಳಿಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತ ಪಕ್ಷ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಜನತೆಯ ಕೆಂಗಣ್ಣಿಗೆ ಗುರಿಯಾಗಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಹಾಗೂ ಗೆಲುವಿಗೆ ಕಾರಣರಾದ ಮತದಾರರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೃತಜ್ಞತೆ ಸಲ್ಲಿಸಿ ಮಾತನಾಡಿದರು.

ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿರುವುದು ಈ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ. ಕೋವಿಡ್‍ ಬಿಕ್ಕಟ್ಟಿನ ಇಂಥ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ, ಹೀಗಾಗಿ ಜನತೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪಕ್ಷದ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಆಶೀರ್ವಾದ ಮಾಡಿ ಗೆಲ್ಲಿಸಿದ ಮತದಾರರ ನಿರೀಕ್ಷೆ ಹುಸಿಯಾಗದಂತೆ ಉತ್ತಮ ರೀತಿಯಲ್ಲಿ ಕೆಲಸ ಮಾಡಿ ಎಂದು ಗೆಲುವು ಸಾಧಿಸಿರುವ ಅಭ್ಯರ್ಥಿಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಿವಿಮಾತು ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು