ಸರ್ಕಾರ ಖಾಸಗಿ‌ ಆಸ್ಪತ್ರೆಗಳ‌ ಸುಲಿಗೆಯನ್ನು ಬೆಂಬಲಿಸುತ್ತಿರುವುದು ನಿರ್ಲಜ್ಜತನದ ಪರಮಾವಧಿ: ಮಾಜಿ ಸಿಎಂ ಸಿದ್ದರಾಮಯ್ಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ನೀಡುವ ಲಸಿಕೆಗೆ ಸೇವಾ ಶುಲ್ಕವನ್ನು ರೂ.100 ರಿಂದ 200ಕ್ಕೆ ಹೆಚ್ಚಿಸಿರುವ ರಾಜ್ಯದ ಬಿಜೆಪಿ ಸರ್ಕಾರ ಯಾರ ಹಿತರಕ್ಷಣೆ‌ ಮಾಡುತ್ತಿದೆ? ರಾಜ್ಯದ ಜನರದ್ದೋ?
ಖಾಸಗಿ ಆಸ್ಪತ್ರೆಗಳದ್ದೋ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಳೆದ ಏಪ್ರಿಲ್‌ನಲ್ಲಿ ರಾಜ್ಯ ಸರ್ಕಾರ ಖಾಸಗಿ‌ ಸಂಸ್ಥೆಗಳು ನೀಡುವ ಲಸಿಕೆಗೆ ರೂ.100 ಸೇವಾ ಶುಲ್ಕವನ್ನು‌ ನಿಗದಿಪಡಿಸಿದ್ದರೂ, ಖಾಸಗಿ ಆಸ್ಪತ್ರೆಗಳು ಲಸಿಕೆಗೆ ಹೆಚ್ಚುವರಿ‌ ಶುಲ್ಕ ವಸೂಲಿ‌ ಮಾಡುತ್ತಿದ್ದಾರೆನ್ನುವ ದೂರುಗಳಿವೆ. ಹೀಗಿರುವಾಗಲೇ ಸರ್ಕಾರ ಸೇವಾ ಶುಲ್ಕ‌ವನ್ನು ದುಪ್ಪಟ್ಟುಗೊಳಿಸಿ ಸುಲಿಗೆಯನ್ನು ಬೆಂಬಲಿಸಿದೆ ಎಂದಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ ಇರುವ ಲಸಿಕೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಯಾಕಿಲ್ಲ ಎಂದು ಹೈಕೋರ್ಟ್‌ ಚಾಟಿ‌ ಬೀಸಿದರೂ ರಾಜ್ಯದ ಬಿಜೆಪಿ ಸರ್ಕಾರ ಖಾಸಗಿ‌ ಆಸ್ಪತ್ರೆಗಳ‌ ಸುಲಿಗೆಯನ್ನು ಬೆಂಬಲಿಸುತ್ತಿರುವುದು ನಿರ್ಲಜ್ಜತನದ ಪರಮಾವಧಿ ಎಂದು ಆರೋಪಿಸಿದ್ದಾರೆ.

ರಾಜ್ಯದ ಜನತೆಗೆ‌ ಉಚಿತವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಕೊರೊನಾ ಲಸಿಕೆ‌ ಸಿಗುವಂತೆ ಮಾಡಬೇಕಾಗಿರುವ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಖಾಸಗಿ ಆಸ್ಪತ್ರೆಗಳ ಪರವಾಗಿ ಪ್ರಚಾರಕ್ಕಿಳಿದಿದ್ದಾರೆ. ಇವರು ಸಚಿವರೋ? ಖಾಸಗಿ ಆಸ್ಪತ್ರೆಗಳ ಪ್ರಚಾರಕರೋ? ಎಂದು ಗುಡುಗಿದ್ದಾರೆ.

ಖಾಸಗಿ ಆಸ್ಪತ್ರೆಗಳು ಲಸಿಕಾ ತಯಾರಿಕ ಸಂಸ್ಥೆ ನಿಗದಿಪಡಿಸಿದ ದರದ ಜೊತೆಗೆ ರೂ.100 ಸೇವಾಶುಲ್ಕ ಮಾತ್ರ ವಸೂಲಿ ಮಾಡಬೇಕೆಂದು ಕೇಂದ್ರ ಸರ್ಕಾರದ ಸುತ್ತೋಲೆ ಇದ್ದರೂ, ಲಸಿಕೆಯನ್ನು 900ರೂ.ಗೆ‌ ಮಾರಾಟ‌ ಮಾಡುತ್ತಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಮ ಯಾಕಿಲ್ಲ‌ ಮುಖ್ಯಮಂತ್ರಿಗಳೇ? ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು