ಸರ್ಕಾರದ ವಿರುದ್ಧ ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲಾಗುವುದು: ಸಿದ್ದರಾಮಯ್ಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ವಿರೋಧ ಪಕ್ಷದ ನಾಯಕ ಎಂದರೆ ಅದು ಸಾಂವಿಧಾನಿಕ ಹುದ್ದೆ. ಹೀಗಾಗಿ ಮಾಹಿತಿ ಸಂಗ್ರಹಿಸಲು ಅನುಮತಿ ನಿರಾಕರಿಸಿರುವುದರಿಂದ ಹಕ್ಕುಚ್ಯುತಿ ಆಗಿದೆ. 2009ರಲ್ಲಿಯೂ ಸರ್ಕಾರ ಇದೇ ನಿಲುವು ಅನುಸರಿಸಿತ್ತು. ಸರ್ಕಾರದ ಹುಳುಕು ಹೊರ ಬರುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅನುಮತಿ ನೀಡುತ್ತಿಲ್ಲ. ಕೊರೊನಾ ನಿಯಂತ್ರಣ ಮತ್ತು ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರುಪಯುಕ್ತ ಎಂಬುದು ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನತೆ ಸರ್ಕಾರಕ್ಕೆ ಹಾಗೂ ಸಿಎಂ ಅವರಿಗೆ ಶಾಪ ಹಾಕುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯದಿಂದ ಸಾವಿರಾರು ಜನ ಸಾಯುತ್ತಿದ್ದಾರೆ. ಸತ್ಯ ಹೇಳಿದರೆ ಕೇಸು ದಾಖಲಿಸುವ, ಬಂಧಿಸುವ ಕೆಲಸವನ್ನು ಸರ್ಕಾರಗಳು ಮಾಡುತ್ತಿವೆ. ಇದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರಾಗಲೀ, ಸಾಮಾಜಿಕ ಕಳಕಳಿಯಿರುವ ಯಾವ ವ್ಯಕ್ತಿಗಳೇ ಆಗಲಿ ಹೆದರಬಾರದು.

ಪ್ರವಾಹ ಪರಿಹಾರದ ವಿಚಾರದಲ್ಲಿಯೂ ಕೇಂದ್ರ ಸರ್ಕಾರ ತಾರತಮ್ಯ ಧೊರಣೆ ಅನುಸರಿಸುತ್ತಿದೆ. ಗುಜರಾತ್ ಗೆ ಒಂದು ಸಾವಿರ ಕೋಟಿ ರೂ.ಗಳ ಪರಿಹಾರ ಘೋಷಣೆ ಮಾಡಿರುವ ಪ್ರಧಾನಿಯವರು ಚಂಡಮಾರುತದಿಂದ ತತ್ತರಿಸಿರುವ ಕರ್ನಾಟಕಕ್ಕೆ ನಯಾಪೈಸೆ ಕೊಟ್ಟಿಲ್ಲ. ನಮ್ಮ‌ ಮೇಲೇಕೆ ಮಲತಾಯಿ ಧೋರಣೆ? ಕೋವಿಡ್ ಲಸಿಕೆ ನೀಡುವುದಕ್ಕೆ ನಾವು ವಿರೋಧ ಮಾಡಿರಲಿಲ್ಲ. ಎಲ್ಲರಿಗೂ ಲಸಿಕೆ ಸಿಗಬೇಕು. ಅದಕ್ಕಾಗಿ ಅಭಿಯಾನ ನಡೆಸಬೇಕು ಎಂದು ಈಗಲೂ ಒತ್ತಾಯ ಮಾಡುತ್ತೇನೆ. ಆದರೆ ಲಸಿಕೆಯೇ ಇಲ್ಲದೆ ಆಂದೋಲನಕ್ಕೆ ಚಾಲನೆ ನೀಡಿದವರು ಯಾರು? ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು