ಸರ್ಕಾರಿ ಆಸ್ಪತ್ರೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೊನಾ ಲಸಿಕೆ : ಸಿಎಂ ಬಿ.ಎಸ್.ವೈ.ಘೋಷಣೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ಮೇ 1ರಿಂದ 18 – 44 ವರ್ಷದೊಳಗಿನ ನಾಗರೀಕರಿಗೆ ಎಲ್ಲ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಕೊರೊನಾ ಲಸಿಕೆ ನೀಡುವ ಬಗ್ಗೆ ಘೋಷಿಸಿದ್ದಾರೆ.

ಅರ್ಹರು ಇದೇ ಏಪ್ರಿಲ್ 28ರಂದು Cowin.gov.in ಅಥವಾ ಆರೋಗ್ಯ ಸೇತು ಆಪ್ ಮೂಲಕ ಕೊರೊನಾ ಲಸಿಕೆಗೆ ನೋಂದಾಯಿಸಿಕೊಳ್ಳಲು ಅವಕಾಶ ಇದೆ, ಎಲ್ಲರೂ ಲಸಿಕೆ ಪಡೆಯುವಂತೆ ಸಿಎಂ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ, ಕೊರೊನಾ ಪ್ರಕರಣಗಳಲ್ಲಿ ರಾಜ್ಯ ಮಹಾರಾಷ್ಟ್ರವನ್ನೂ ಮೀರಿಸಿದೆ. ಕೊರೊನಾ ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ 18 ರಿಂದ 45 ವರ್ಷದವರಿಗೆ ಉಚಿತವಾಗಿ ಕೊರೊನಾ ಲಸಿಕೆ ಒದಗಿಸುತ್ತೇವೆ. ರಾಜ್ಯಾದ್ಯಂತ ನಾಳೆ ರಾತ್ರಿಯಿಂದ 14 ದಿನ ಬಿಗಿ ಕ್ರಮ ಜಾರಿಗೊಳಿಸುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು