ಸಾರ್ವಜನಿಕರ ಮೇಲೆ ಅನಗತ್ಯ ಬಲಪ್ರಯೋಗ ಮಾಡಬೇಡಿ: ಪೋಲಿಸ್ ಆಯುಕ್ತ ಕಮಲ್ ಪಂತ್ ಸೂಚನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಒಂದು ವೇಳೆ ಸಾರ್ವಜನಿಕರು ಲಾಕ್ ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಪೋಲೀಸರು ಕ್ರಮ ಕೈಗೊಳ್ಳಬೇಕು ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಎಂದು ಬೆಂಗಳೂರು ಪೋಲಿಸ್ ಆಯುಕ್ತ ಕಮಲ್ ಪಂತ್ ಸೂಚನೆ ನೀಡಿದ್ದಾರೆ.

ಇಂದಿನಿಂದ ರಾಜ್ಯ ಸಂಪೂರ್ಣ ಬಂದ್ ಹಿನ್ನೆಲೆಯಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಬೇಕಾಬಿಟ್ಟಿಯಾಗಿ ಹೊರಬಂದವರಿಗೆ ಪೋಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಮೊದಲೇ ಜನರು ಸಂಕಷ್ಟದಲ್ಲಿದ್ದಾರೆ, ಇಂಥ ಸಂದರ್ಭದಲ್ಲಿ ಪೋಲೀಸರು ಹೇಳದೇ ಕೇಳದೇ ಹೊಡೆಯುವುದು ಎಷ್ಟು ಸರಿ, ಜನರಿಗೆ ತೊಂದರೆ ಕೊಡುವುದು ಸರಿ ಅಲ್ಲ ಎನ್ನುವ ಮಾತುಗಳು ಕೇಳಿ ಬಂದಿದವು.

ಇದನ್ನು ಅವಲೋಕಿಸಿದ ಪೋಲೀಸರು ಆಯುಕ್ತರು ಈ ಬಗ್ಗೆ ಟ್ವೀಟ್ ಮಾಡಿ, ಲಾಕ್ ಡೌನ್ ಸಂದರ್ಭದ ನಿಷೇಧಾಜ್ಞೆ ಜಾರಿಯಲ್ಲಿ ಸಾರ್ವಜನಿಕರಿಗೆ ಅನಗತ್ಯವಾಗಿ ಕ್ರಮ ಕೈಗೊಳ್ಳಬೇಡಿ ಎಂದು ಪೋಲೀಸರಿಗೆ ಸೂಚಿಸಿದ್ದಾರೆ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ಕೊರೊನ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಲಾಕ್ ಡೌನ್ ಜಾರಿಯಾಗಿರುವ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಒಪ್ಪಿಗೆ ನೀಡಲಾದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಥವಾ ಕೆಲಸದ ಸ್ಥಳಕ್ಕೆ ಪ್ರಯಾಣಿಸುವ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಾದಲ್ಲಿ ಡಿಸಿಪಿ ಇಂಟಲಿಜೆನ್ಸ್ ಶ್ರೀ ಸಂತೋಷ್ ಬಾಬು ಅವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-22942354 ಎಂದು ಬೆಂಗಳೂರು ನಗರ ಕಮಲ್ ಪಂತ್ ಅವರು ಮಾಹಿತಿ ನೀಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು