ಜಪ್ತಿಯಾಯಿತು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಆಸ್ತಿ: ಜಪ್ತಿಯಾದ ಮೊತ್ತವೆಷ್ಟು ಗೊತ್ತೇ?

sasikala
Share on facebook
Share on twitter
Share on linkedin
Share on whatsapp
Share on telegram
Share on email
Share on print

ಹೊಸದೆಹಲಿ(07/10/2020):  ಆದಾಯ ತೆರಿಗೆ ಇಲಾಖೆ ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರಿಗೆ ಸೇರಿದ್ದ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಐಟಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಿದೆ.

ನಾಲ್ಕು ವರ್ಷಗಳ ಜೈಲು ಶಿಕ್ಷೆ ಮುಗಿಸಿ ಬಿಡುಗಡೆಯಾದ ನಂತರ ವಾಸವಾಗಿರಬೇಕೆಂದುಕೊಂಡಿದ್ದ ಬಂಗಲೆಯನ್ನು ಕೂಡಾ ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿಕೊಂಡಿದೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು  ತಮಿಳುನಾಡು, ಪುದುಚೇರಿಯಲ್ಲಿ ಶಶಿಕಲಾ ಹಾಗೂ ಅವರ ಪತಿ ನಟರಾಜನ್, ಸಂಬಂಧಿಗಳಿಗೆ ಸೇರಿದ್ದ ಹಲವಾರು ಸ್ಥಳಗಳ ಮೇಲೆ 2017ರಲ್ಲಿ ದಾಳಿ ನಡೆಸಿದ್ದರು. ಆಗ 1,500 ಕೋಟಿ ರೂಪಾಯಿ ಆದಾಯ ತೆರಿಗೆ ವಂಚನೆ ಪತ್ತೆಯಾಗಿತ್ತು. ಅಲ್ಲದೇ 7 ಕೋಟಿ ರೂಪಾಯಿ ನಗದು, 5 ಕೋಟಿ ಮೌಲ್ಯದ ಆಭರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು