ಸೌದಿ ಅರೇಬಿಯಾ: ಶಾಲಾ ಕಾಲೇಜುಗಳು ಆನ್ಲೈನ್ ಮೂಲಕವೇ ಮುಂದುವರಿಸಲು ಸೂಚನೆ

school
Share on facebook
Share on twitter
Share on linkedin
Share on whatsapp
Share on telegram
Share on email
Share on print

ಸೌದಿ(10-10-2020): ಕೊರೋನಾ ಸೋಂಕಿತರ ಸಂಖ್ಯೆಯಲ್ಲಿನ ಹೆಚ್ಚಳದಿಂದಾಗಿ ಶಾಲಾ ಕಾಲೇಜುಗಳನ್ನು ಆನ್ಲೈನ್ ಮೂಲಕವೇ ಮುಂದುವರಿಸಲು ಸೌದಿ ಶಿಕ್ಷಣ ಇಲಾಖೆಯಿಂದ ಸೂಚನೆ ದೊರೆತಿದೆ. ಈ ಶೈಕ್ಷಣಿಕ ವರ್ಷದ ಮೊದಲ ಸೆಮಿಸ್ಟರ್ ವರೆಗೂ ಆನ್ ಲೈನ್ ಶಿಕ್ಷಣ ಮುಂದುವರಿಸಲು ಸರಕಾರ ಹೇಳಿದೆ.

ದೇಶದಲ್ಲಿರುವ ಶಾಲಾ ಕಾಲೇಜುಗಳು, ವಿಶ್ವವಿದ್ಯಾಲಯಗಳು, ತಾಂತ್ರಿಕ ವಿದ್ಯಾ ಸಂಸ್ಥೆಗಳು ಸೇರಿ ಪ್ರತಿಯೊಂದು ಶೈಕ್ಷಣಿಕ ಸಂಸ್ಥೆಗಳು ಈ ರೀತಿಯಲ್ಲೇ ಮುಂದುವರಿಯಲಿದ್ದು, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಇಂತಹ ತೀರ್ಮಾನ ಅಗತ್ಯವಾಗಿದೆಯೆಂದು ಸೌದಿ ಶಿಕ್ಷಣ ಮಂತ್ರಿ ಡಾ| ಹಮದ್ ಅಲ್ ಶೈಖ್ ತಿಳಿಸಿದ್ದಾರೆ.

ಪ್ರಾರಂಭದ 7 ವಾರಗಳ ಮಟ್ಟಿಗೆ ಆನ್ಲೈನ್ ಮೂಲಕ ಶಿಕ್ಷಣ ನೀಡಲು ಈ ಮೊದಲು ಹೇಳಲಾಗಿತ್ತು. ಆದರೆ ಕಳೆದ ಕೆಲವು ವಾರಗಳಲ್ಲಿ ವಿದ್ಯಾಸಂಸ್ಥೆಗಳ ಕಾರ್ಯ ಚಟುವಟಿಕೆಗಳು ಮತ್ತು ದೇಶದ ಪರಿಸ್ಥಿತಿಯನ್ನು ಅವಲೋಕಿಸಿ, ಈ ಹೊಸ ಆದೇಶ ಬಂದಿದೆ. ಜೊತೆಗೆ ಆರೋಗ್ಯ ಇಲಾಖೆಯ ಸಲಹೆಯನ್ನೂ ಪಡೆಯಲಾಗಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು