ಕಪ್ಪು ಹಣ ಮುಟ್ಟುಗೋಲು ಕುರಿತು ನಿರ್ದೇಶನ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

suprem court
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(11-12-2020): ಕಪ್ಪು ಹಣ, ಬೇನಾಮಿ ಆಸ್ತಿ ಮತ್ತು ಅಕ್ರಮ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಿದ್ದ ಮನವಿಯನ್ನು ವಿಚಾರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ನ್ಯಾಯಪೀಠವು ಕಾನೂನನ್ನು ರಚಿಸಲು ಸಂಸತ್ತಿಗೆ ಸೂಚನೆ ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ, ಅರ್ಜಿದಾರರು ಅದನ್ನು ಹಿಂತೆಗೆದುಕೊಂಡರು.

ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಲಂಚ, ಕಪ್ಪು ಹಣ, ಬೆನಾಮಿ ಆಸ್ತಿ, ತೆರಿಗೆ ವಂಚನೆ, ಅಕ್ರಮ ಹಣ ವರ್ಗಾವಣೆ, ಆಹಾರ ಕಲಬೆರಕೆ, ಮಾನವ ಮತ್ತು ಮಾದಕವಸ್ತು ಕಳ್ಳಸಾಗಣೆ, ಕಪ್ಪು ಮಾರುಕಟ್ಟೆ ಮತ್ತು ಮೋಸ ಮುಂತಾದ ಅಪರಾಧಗಳಿಗೆ ಜೀವಾವಧಿ ಶಿಕ್ಷೆ ಕೋರಲಾಗಿದೆ.

ಈ ವರ್ಷದ ಆರಂಭದಲ್ಲಿ ಭ್ರಷ್ಟಾಚಾರ ವಿಚಾರದಲ್ಲಿ ಭಾರತದ ಸ್ಥಿತಿಗತಿಯ ಬಗ್ಗೆ ‘ಟ್ರಾನ್ಸ್ಪರೆನ್ಸಿ ಇಂಟರ್‌ನ್ಯಾಷನಲ್’ ನೀಡಿದ ವರದಿಯನ್ನು ಆಧಾರವಾಗಿಟ್ಟುಕೊಂಡು ಮನವಿಯನ್ನು ಸಲ್ಲಿಕೆ ಮಾಡಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು