ಯಾವುದೇ ಕಾರಣಕ್ಕೂ ಶಾಲಾ ಕಾಲೇಜು ಬಂದ್ ಆಗಲ್ಲ: ಶಿಕ್ಷಣ ಸಚಿವ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ, ಕಾಲೇಜು ಬಂದ್ ಇಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ನಡೆಸಿದ ಪತ್ರಿಕಾಗೋಷ್ಠಿಯನ್ನುಧ್ಧೇಶಿಸಿ ಮಾತನಾಡಿದ ಸಚಿವರು, ಎಂದಿನಂತೆ ಶಾಲಾ, ಕಾಲೇಜಿನ ತರಗತಿ ನಡೆಯುತ್ತವೆ, ಈ ಬಗ್ಗೆ ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಹಾಗೂ ಶಿಕ್ಷಕರಲ್ಲಿ ಯಾವುದೇ ಗೊಂದಲ ಬೇಡ. ಕೊರೊನಾ ಮೂರನೇ ಅಲೆ ಹಾಗೂ ಒಮಿಕ್ರಾನ್ ಬಗ್ಗೆ ಈಗಾಗ್ಲೆ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ಜೊತೆಗೆ ಆರೋಗ್ಯ ತಜ್ಞರೊಂದಿಗೂ ಕೂಡ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಇನ್ನು ತರಗತಿಗಳಲ್ಲಿ ಕೊರೊನಾ ನಿಯಮಗಳನ್ನ ಕಟ್ಟು ನಿಟ್ಟಾಗಿ ಪಾಲನೆ ಮಾಡಬೇಕು, ಮಕ್ಕಳ ಪೋಷಕರು  ಶಾಲೆಗೆ ಬರಬೇಕಾದರೆ ಕಡ್ಡಾಯವಾಗಿ ಎರಡು ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು