ಬೆಂಗಳೂರು(16-02-2021):6ರಿಂದ 8ನೇ ತರಗತಿವರೆಗೆ ಫೆ. 22ರಿಂದ ಪೂರ್ಣ ಪ್ರಮಾಣದಲ್ಲಿ ತರಗತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, 9,10 ಮತ್ತು ಪಿಯು ತರಗತಿಯ ಹಾಜರಾತಿ ಉತ್ತಮವಾಗಿದೆ. ನಾವು ವಿದ್ಯಾರ್ಥಿಗಳು ಕಡ್ಡಾಯವಾಗಿ ಬರಬೇಕು ಎಂದು ಹೇಳಿರಲಿಲ್ಲ. ಆದರೆ ಈ ಪ್ರಯತ್ನಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಶಾಲೆಗಳನ್ನ ಆರಂಭಿಸಲು ತಾಂತ್ರಿಕ ಸಲಹಾ ಸಮಿತಿ ಕೂಡ ಅನುಮತಿ ನೀಡಿದೆ ಎಂದು ಹೇಳಿದ್ದಾರೆ.