ಶಾಲಾ ಕಾಲೇಜುಗಳು ಯಾವಾಗ ಆರಂಭ?

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(29-09-2020): ಅಕ್ಟೋಬರ್ ಆರಂಭದಲ್ಲಿ ಶಾಲಾ -ಕಾಲೇಜುಗಳು ಆರಂಭವಾಗುತ್ತದೆ ಎಂಬ ಗೊಂದಲಕ್ಕೆ  ಸಚಿವ ಸುರೇಶ್ ಕುಮಾರ್ ತೆರೆ ಎಳೆದಿದ್ದು, ಈ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

 ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ಯೋಚನೆ ಸಧ್ಯ ಇಲ್ಲ.

ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆಯುತ್ತೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಅಕ್ಟೋಬರ್ ಗೆ  ಶಾಲಾ-ಕಾಲೇಜುಗಳು ಆರಂಭವಾಗುತ್ತದೆ ಎಂದು ಹೇಳಲಾಗುತ್ತಿತ್ತು. ಸೆ.15ರಿಂದಲೇ ಈ ಬಗ್ಗೆ ಆದೇಶ ಬರುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಸರಕಾರ ಈ ಬಗ್ಗೆ ಯಾವುದೇ ಸಧ್ಯ ಯೋಚನೆ ಇಲ್ಲ ಎಂದು ಹೇಳಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು