“ನನ್ನನ್ನು ಕಡೆಗಣಿಸಿ, ಕಿರಿಯರಿಗೆ ಭಡ್ತಿ ನೀಡಿದ್ದಾರೆ”- ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ರಾಜೀನಾಮೆ

ravindranth ips
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(29-10-2020): ಭಡ್ತಿ ನೀಡಿಲ್ಲ ಎಂದು ಅಸಮಾಧಾನಗೊಂಡು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ರವೀಂದ್ರನಾಥ್ ರಾಜೀನಾಮೆ ನೀಡಿದ್ದಾರೆ.

ನಿನ್ನೆ ರಾಜ್ಯ ಸರ್ಕಾರ ಮೂವರು ಅಧಿಕಾರಿಗಳಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿತ್ತು. ಅರಣ್ಯ ಇಲಾಖೆಯ ಎಡಿಜಿಪಿಯಾಗಿರುವ ರವೀಂದ್ರನಾಥ್, ತನಗಿಂತ ಕಿರಿಯ ಅಧಿಕಾರಿಗಳಿಗೆ ಬಡ್ತಿ ನೀಡಿರುವುದರ ಬಗ್ಗೆ ಅಸಮಾಧಾನ ಹೊರಹಾಕಿ ರಾಜೀನಾಮೆ ಸಲ್ಲಿಸಿದ್ದಾರೆ.

ತಡರಾತ್ರಿ ಡಿಜಿ ಭೇಟಿಗೆ ಅವಕಾಶ ಸಿಗದ ಕಾರಣ ರವೀಂದ್ರನಾಥ್ ಕಂಟ್ರೋಲ್ ರೂಂಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಪತ್ರದಲ್ಲಿ ತಮ್ಮ ಅಸಮಾಧಾನದ ಬಗ್ಗೆ ಉಲ್ಲೇಖಿಸಿದ್ದಾರೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು