ಹೊಸದೆಹಲಿ(14/10/2020): ಬಿಹಾರವು ವಿಧಾನಸಭಾ ಚುನಾವಣೆಗೆ ಸಿದ್ಧಗೊಂಡಿರುವಾಗಲೇ ಲೋಕತಾಂತ್ರಿಕ ಜನತಾ ದಳದ ಮುಖ್ಯಸ್ಥ ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ಯಾದವ್ ಅವರು ಬುಧವಾರ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
ಸುಭಾಷಿಣಿ ಜೊತೆಗೆ ಲೋಕತಾಂತ್ರಿಕ ಪಕ್ಷದ ಮುಖಂಡ ಹಾಗೂ ಮಾಜಿ ಸಂಸದ ಕಾಳಿ ಪಾಂಡೆ ಕೂಡಾ ಕಾಂಗ್ರೆಸ್ ಸೇರಿದ್ದಾರೆ. ಇಬ್ಬರೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೋರಿದ್ದಾರೆ ಎನ್ನಲಾಗಿದೆ.