ಬೆಂಗಳೂರು(18-02-2021): ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಫೆ.26 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಬಚ್ಚೇಗೌಡ ಅವರ ಪುತ್ರರಾಗಿರುವ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಕೆಪಿಸಿಸಿ ಕಛೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರು ಸೇರ್ಪಡೆಯಾಗಲಿದ್ದಾರೆ.
ಶರತ್ ಬಚ್ಚೇಗೌಡ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಸೇರ್ಪಡೆಗೊಂಡಿದ್ದ ಎಂಟಿಬಿ ನಾಗರಾಜ್ ವಿರುದ್ಧ ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ದರು.