ಚೆನ್ನೈ (08-11-2020): ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ನ.9ರಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.
2009ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ 2017ರ ಅ.10ರಂದು ದ.ಕ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಬಳಿಕ 2019ರ ಸೆ.6 ರಂದು ಐಎಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರದ ಆಡಳಿತ ಶೈಲಿಗೆ ಬೇಸತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಆ ಬಳಿಕ ಸಿಎಎ ವಿರೋಧಿ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದರು. ಇದೀಗ ಅಧೀಕೃತವಾಗಿ ಅವರು ಕಾಂಗ್ರೆಸ್ ಗೆ ಸೇರಲು ಸಜ್ಜಾಗಿದ್ದಾರೆ.