ಶಿವಮೊಗ್ಗ(13-12-2020): ಎರಡು ವರ್ಷದ ಮಗು ಬಿಸಿ ಸಾಂಬಾರಿನ ಪಾತ್ರೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿ ನಡೆದಿದೆ.
ಈ ಹಿಂದೆ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ವೇಳೆ ಬಿಸಿ ಸಾಂಬಾರಿನ ಪಾತ್ರೆ ಮಗುಚಿ ಬಿದ್ದು ಪುಟ್ಟ ಮಗುವಿಗೆ ಗಂಭೀರವಾಗಿ ಗಾಯವಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗಿತ್ತು.
ಕಳೆದ 10ದಿನಗಳಿಂದ ಜೀವನ್ಮರಣ ಸ್ಥಿತಿಯಲ್ಲಿದ್ದ ಮಗು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.