ಶಿವಮೊಗ್ಗ ಗಲಭೆ: ಬಂಧಿತರೆಷ್ಟು? ಗಾಯಗೊಂಡವರೆಷ್ಟು? ಇಂದಿನ ಪರಿಸ್ಥಿತಿ ಹೇಗಿದೆ? ಇಲ್ಲಿದೆ ಮಾಹಿತಿ….

nagesh
Share on facebook
Share on twitter
Share on linkedin
Share on whatsapp
Share on telegram
Share on email
Share on print

ಶಿವಮೊಗ್ಗ(04-12-2020):  ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 19ಮಂದಿ ಗಾಯಗೊಂಡಿದ್ದು, 62 ಮಂದಿಯನ್ನು ಬಂಧಿಸಲಾಗಿದೆ ಎಂದುಪೂರ್ವ ವಲಯ ಐಜಿಪಿ ಎಸ್.ರವಿ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಐಜಿಪಿ ಎಸ್.ರವಿ,ನಗರದಲ್ಲಿ148 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಬೇರೆ ಜಿಲ್ಲೆಗಳಿಂದ ಬರುವ ದುಷ್ಕರ್ಮಿಗಳನ್ನು ತಡೆಯಲು 9 ಕಡೆ ಚೆಕ್ ಪೋಸ್ಟ್ ಮಾಡಲಾಗಿದೆ.19 ಮೊಬೈಲ್ ಗಸ್ತು ವಾಹನ ಸೇರಿದಂತೆ ಪೊಲೀಸ್ ವಾಹನಗಳು ನಗರದಲ್ಲಿ ಗಸ್ತು ತಿರುಗಾಡುತ್ತಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗ ನಗರ ಹತೋಟಿಗೆ ಬಂದಿದೆ. ದೊಡ್ಡಪೇಟೆ ಮತ್ತು ಕೋಟೆ‌ಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ನಾಗೇಶ್ ಹಲ್ಲೆ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ನಗರದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ದಾವಣಗೆರೆ ವಲಯದಲ್ಲಿ 1,000 ಪೊಲೀಸರನ್ನು ನೇಮಕ ಮಾಡಲಾಗಿದೆ. ಡಿ.5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಹೇಳಿದ್ದಾರೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು