ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ| ತಕ್ಷಣಕ್ಕೆ ಜಾರಿ ಬರುವಂತೆ ನಿಷೇಧಾಜ್ಞೆ ಜಾರಿ

nagesh
Share on facebook
Share on twitter
Share on linkedin
Share on whatsapp
Share on telegram
Share on email
Share on print

ಶಿವಮೊಗ್ಗ(12-03-2020): ಬಜರಂಗದಳದ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಯಲ್ಲಿ ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಡಿ. 5ರ ಬೆಳಿಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಬಜರಂಗದಳದ ಸಹ ಸಂಚಾಲಕ ನಾಗೇಶ್ ಮೇಲೆ ಹಲ್ಲೆ ನಡೆದಿದೆ. ಇದರಿಂದಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆ ಬಳಿ ಜನ ಜಮಾಯಿಸಿದ್ದರು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಾಹ್ನ ಶಿವಮೊಗ್ಗ ನಗರ ಕೋಟೆ ಠಾಣಾ ವ್ಯಾಪ್ತಿಯಲ್ಲಿ ಎರಡು ಕೋಮಿನ ನಡುವೆ ಜಗಳ ಕೂಡ ಉಂಟಾಗಿತ್ತು. ಈ ಕುರಿತು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು