ಕೊಚ್ಚಿ: ಮೆಟ್ರೋ ಮ್ಯಾನ್ ಇ. ಶ್ರೀಧರನ್ ಅವರನ್ನು ಕೇರಳದಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಗುರುವಾರ ಹೇಳಿಕೆ ನೀಡಿದ್ದರು. ಆದರೆ, ಅಂತಹ ಯಾವುದೇ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಹೇಳಿದೆ.
ಕೊಂಕಣ ರೈಲ್ವೆ ಮತ್ತು ದೆಹಲಿ ಮೆಟ್ರೋ ರೈಲು ಒಳಗೊಂಡಂತೆ ಪ್ರಮುಖ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಶ್ರೀಧರನ್ ಅವರನ್ನು ಕೇರಳದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಪಕ್ಷ ಮಾಡಿದೆ ಬಿಜೆಪಿಯ ವಿಜಯ ಯಾತ್ರೆಯಲ್ಲಿ ಸುರೇಂದ್ರನ್ ಹೇಳಿದ್ದರು.
ಆದರೆ, ವಿದೇಶಾಂಗ ಮತ್ತು ಸಂಸದೀಯ ವ್ಯವಹಾರಗಳ ಸಹಾಯಕ ಸಚಿವ ವಿ. ಮುರಳೀಧರನ್, ಶ್ರೀಧರನ್ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಮಾಧ್ಯಮಗಳ ವರದಿ ಜನರನ್ನು ದಾರಿತಪ್ಪಿಸಿದೆ. ಪಕ್ಷದ ಮುಖ್ಯಸ್ಥರೊಂದಿಗೆ ಚರ್ಚಿಸಿದ ನಂತರ ಇಂತಹ ಘೋಷಣೆ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.