ಶಾಲಾ ಶುಲ್ಕ ಪಾವತಿ ಮಾಡಿಲ್ಲ ಎಂದು ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ : ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ರಾಜ್ಯದ ಖಾಸಗಿ ಶಾಲೆಗಳು ಪೋಷಕರಿಗೆ ಫೀಸು ಕುರಿತು ಕಿರುಕುಳ ನೀಡುವ ಪ್ರಕರಣಗಳು ಕೇಳಿಬರುತ್ತಿವೆ. ಹೀಗಾಗಿ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂಬುದಾಗಿ ಹೇಳಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ. ಒಂದು ವೇಳೆ ಬಂದ್ ಮಾಡಿದ ಬಗ್ಗೆ ದೂರು ಸಲ್ಲಿಕೆಯಾದರೆ ಅಂತಹ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯಾವುದೇ ಶಾಲೆಗಳು ವಿದ್ಯಾರ್ಥಿಗಳು ಶುಲ್ಕ ಪಾವತಿ ಮಾಡಿಲ್ಲ ಎಂಬುದಾಗಿ ಹೇಳಿ, ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ ಎಂದಿದ್ದಾರೆ.
ಶುಲ್ಕದ ನೆಪವೊಡ್ಡಿ ಬಂದ ಮಾಡುವ ಶಾಲೆಗಳ ವಿರುದ್ಧ ಕ್ರಮಕ್ಕೂ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಅಲ್ಲದೇ ಹೈಕೋರ್ಟ್, ಸುಪ್ರೀಂ ಕೋರ್ಟ್ ಸೂಚನೆ ಕೂಡ ಇದೆ ಎಂದರು.

ಹಾಗೆಯೇ ಶಾಲೆಗಳು ಶಾಲಾ ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡಿದ್ದರ ಬಗ್ಗೆ ಪೋಷಕರು ದೂರು ನೀಡಬಹುದು. ನನಗೆ ಇಲ್ಲವೇ ನಿಮ್ಮ ಶಾಲಾ ವ್ಯಾಪ್ತಿಯ ಬಿಇಓಗಳಿಗೆ ದೂರು ನೀಡಿದ್ರೆ ಸಾಕು, ಅಂತಹ ಶಾಲೆಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ಸಚಿವರು ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು