ಮುಂಬೈ(16/10/2020): ಸುಳ್ಳು ಸುದ್ದಿ ಹರಡಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ದೆಹಲಿಯ ವಿಭೋರ್ ಆನಂದ್ ಎಂಬ ವಕೀಲರೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ಈ ವಕೀಲರು ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹರಡಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರ ಹೆಸರನ್ನು ಈ ವಿಭೋರ್ ಸುಶಾಂತ್ ಆತ್ಮಹತ್ಯೆ ಪ್ರಕರಣದಲ್ಲಿ ಎಳೆದು ತಂದಿದ್ದರು.