ಬಿಗ್ ನ್ಯೂಸ್| ಮದರಸಾ ಮುಚ್ಚುವ ಪ್ರಸ್ತಾಪಕ್ಕೆ ಕ್ಯಾಬಿನೆಟ್ ನಲ್ಲಿ ಅನುಮೋದನೆ

madarasa
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(14-12-2020): ಮಹತ್ವದ ಬೆಳವಣಿಗೆಯೊಂದರಲ್ಲಿ ಅಸ್ಸಾಂ ಕ್ಯಾಬಿನೆಟ್ ರಾಜ್ಯದ ಎಲ್ಲಾ ಸರ್ಕಾರಿ ಮದರಸಾ ಮತ್ತು ಸಂಸ್ಕೃತ ಟೋಲ್‌ಗಳನ್ನು (ಶಾಲೆಗಳು) ಮುಚ್ಚುವ ಪ್ರಸ್ತಾಪಕ್ಕೆ ಅನುಮೋದನೆ ನೀಡಿದೆ.

ರಾಜ್ಯ ವಿಧಾನಸಭೆಯ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಈ ಸಂಬಂಧ ಮಸೂದೆಯನ್ನು ಬಿಜೆಪಿ ನೇತೃತ್ವದ ಸರ್ಕಾರ ಮಂಡಿಸಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಚಂದ್ರ ಮೋಹನ್ ಪಟೋವರಿ ಹೇಳಿದ್ದಾರೆ.

ಮದರಸಾ ಮತ್ತು ಸಂಸ್ಕೃತ ಟೋಲ್‌ಗಳಿಗೆ ಸಂಬಂಧಿಸಿದ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ರದ್ದುಗೊಳಿಸಲಾಗುವುದು. ವಿಧಾನಸಭೆಯ ಮುಂದಿನ ಅಧಿವೇಶನದಲ್ಲಿ ಮಸೂದೆಯನ್ನು ತರಲಾಗುವುದು ಎಂದು ಅಸ್ಸಾಂ ಸರ್ಕಾರದ ವಕ್ತಾರರೂ ಆಗಿರುವ ಪಟೋವರಿ ಹೇಳಿದ್ದಾರೆ.

ಅಸ್ಸಾಂ ವಿಧಾನಸಭೆಯ ಚಳಿಗಾಲದ ಅಧಿವೇಶನ ಡಿಸೆಂಬರ್ 28 ರಿಂದ ಪ್ರಾರಂಭವಾಗಲಿದೆ. ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಿ ಮದ್ರಾಸಾ ಮತ್ತು ಸಂಸ್ಕೃತ ಟೋಲ್‌ಗಳನ್ನು ಮುಚ್ಚುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಟೋವರಿ ಹೇಳಿದ್ದಾರೆ.

ಅಸ್ಸಾಂ ಸರ್ಕಾರವು ಧಾರ್ಮಿಕ ಗ್ರಂಥಗಳನ್ನು ಕಲಿಸಲು ಸಾರ್ವಜನಿಕ ಹಣವನ್ನು ಬಳಸಿಕೊಳ್ಳಲು ಸಾಧ್ಯವಾಗದ ಕಾರಣ ಎಲ್ಲಾ ಸರ್ಕಾರಿ ಮದ್ರಸಾ ಮತ್ತು ಸಂಸ್ಕೃತ ಟೋಲ್‌ಗಳನ್ನು (ಶಾಲೆಗಳು) ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಅಸ್ಸಾಂ ಶಿಕ್ಷಣ ಮತ್ತು ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಅಕ್ಟೋಬರ್‌ನಲ್ಲಿ ಘೋಷಿಸಿದ್ದರು.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು