ಸಿದ್ದರಾಮಯ್ಯನವರು ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸಲು ಒಪ್ಪಿದರೆ ಕ್ಷೇತ್ರ ತ್ಯಾಗ ಮಾಡುವೆ: ಶಾಸಕ ಜಮೀರ್ ಅಹ್ಮದ್ ಖಾನ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯದ ಅಭಿವೃದ್ಧಿ ಹಾಗೂ ಬಡವರ ಕಲ್ಯಾಣದ ದೃಷ್ಟಿಯಿಂದ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು. ಅದಕ್ಕೆ ಅವರು ದೂರದ ಬಾದಾಮಿ ಕ್ಷೇತ್ರದ ಬದಲು ನಾನು ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದರೆ ನಾನು ಅವರಿಗಾಗಿ ಕ್ಷೇತ್ರ ತ್ಯಾಗ ಮಾಡಲು ಸಿದ್ಧ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ನಾವು 2018ರಲ್ಲಿ ತಪ್ಪು ಮಾಡಿದೆವು. ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಕೊಟ್ಟಿರುವ ಕಾರ್ಯಕ್ರಮಗಳನ್ನು ಈ ಹಿಂದೆ ಯಾರು ಕೊಟ್ಟಿರಲಿಲ್ಲ, ಮುಂದೆ ಕೊಡಲು ಸಾಧ್ಯವೂ ಇಲ್ಲ. ನಮ್ಮ ರಾಜ್ಯಕ್ಕೆ ಹಾಗೂ ಬಡವರ ಕಲ್ಯಾಣವಾಗಬೇಕಾದರೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ರಾಜ್ಯದ ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅವರಿಗೆ ಬಾದಾಮಿ ಕ್ಷೇತ್ರ ಬೇಡ. ನೀವು ರಾಜ್ಯಾದ್ಯಂತ ಪ್ರವಾಸ ಮಾಡಿ, ನಾನು ನನ್ನ ಕ್ಷೇತ್ರವನ್ನು ನಿಮಗೆ ಬಿಟ್ಟುಕೊಡಲು ಸಿದ್ಧನಿದ್ದೇನೆ. ನೀವು ಕೇವಲ ನಾಮಪತ್ರ ಸಲ್ಲಿಕೆ ಮಾಡಿ ಹೋಗಿ, ನಿಮ್ಮನ್ನು ಕನಿಷ್ಠ 70 ಸಾವಿರ ಮತಗಳ ಅಂತರದಿಂದ ಗೆಲ್ಲಿಸುತ್ತೇವೆ. ನಿಮಗೆ ಗೆಲ್ಲಿಸದಿದ್ದರೆ ನಾನು ರಾಜಕೀಯ ಜೀವನ ತ್ಯಾಗ ಮಾಡುವೆ, ನಾನು ಸಿದ್ದರಾಮಯ್ಯ ಅವರಿಗೆ ನಾನು ಸ್ಪರ್ಧೆ ಮಾಡುವಂತೆ ಆಹ್ವಾನ ನೀಡಿದ್ದೇನೆ. ಆದರೆ, ಈವರೆಗೆ ಅವರು ಅದಕ್ಕೆ ಒಪ್ಪಿಗೆ ಸೂಚಿಸಿಲ್ಲ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದರು.

ಬಿಜೆಪಿಯವರು ಜನರ ತೆರಿಗೆ ಹಣದಿಂದಲೇ ಜನರಿಗೆ ನೆರವು ನೀಡುತ್ತಿದ್ದಾರೆ. ಲಸಿಕೆ, ಚಿಕಿತ್ಸೆ ಎಲ್ಲವೂ ಜನರ ತೆರಿಗೆ ಹಣದಿಂದಲೆ ತಾನೇ ಖರ್ಚು ಮಾಡುತ್ತಿರುವುದು. ಹಾಗೆ ನಾವು ನಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಎರಡು ಕೋಟಿ ರೂ.ಗಳಲ್ಲಿ ಒಂದು ಕೋಟಿ ರೂ.ಗಳನ್ನು ಲಸಿಕೆಗಾಗಿ ಕೊಡುತ್ತೇವೆ ಎಂದು ಹೇಳಿದ್ದೇವೆ. ನಾವು ಕೊಡುತ್ತಿರುವುದು ತೆರಿಗೆ ಹಣವೇ, ನಾವೇನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದೇವಾ? ಕಾಂಗ್ರೆಸ್‍ನವರಿಗೆ ಲಸಿಕೆ ನೀಡಲು ಸರ್ಕಾರ ಅವಕಾಶ ಮಾಡಿಕೊಟ್ಟರೆ ಅವರ ಜನಪ್ರಿಯತೆ ಹೆಚ್ಚಾಗುತ್ತದೆ ಎಂದು ಬಿಜೆಪಿಯವರು ಅನುಮತಿ ನೀಡುತ್ತಿಲ್ಲ ಎಂದು ಅವರು ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು