ಬೆಂಗಳೂರು(27/10/2020): ಆರ್.ಆರ್. ನಗರ ಕ್ಷೇತ್ರದ ಯಶವಂತಪುರ ಬಿ.ಕೆ. ನಗರದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಈ ವೇಳೆ ಸಿದ್ಧರಾಮಯ್ಯನವರು ಬಿಜೆಪಿ ಕಾರ್ಯಕರ್ತರನ್ನು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.
‘ಸೋಲುವ ಭಯದಿಂದ ಬಂದು ಗಲಾಟೆ ಮಾಡುತ್ತಿದ್ದೀರಿ. ರೌಡಿಗಳು ಇವರು. ಸೋಲುವ ಭಯದಿಂದ ರೌಡಿಸಂ ಮಾಡುತ್ತಿದ್ದಾರೆ. ಮುನಿರತ್ನ ನಾಯ್ಡು ನಿಮ್ಮನ್ನು ಕಳುಹಿಸಿದ್ದಾರೆ ಎಂದು ಗೊತ್ತಿದೆ. ನಾವು ಹೆದರುವುದಿಲ್ಲ. ಮತದಾರರು ನೋಡುತ್ತಿದ್ದಾರೆ ಎಂದು ಸಿದ್ಧರಾಮಯ್ಯನವರು ಹೇಳುವ ವಿಡಿಯೋ ಕ್ಲಿಪ್ ಒಂದು ವೈರಲ್ ಆಗಿದೆ.