ಅರಸೀಕೆರೆ(25-11-2020): ಜೆಡಿಎಸ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ಧಾಳಿಯನ್ನು ನಡೆಸಿದ್ದು, ಶಿರಾ ಹಾಗೂ ಆರ್.ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಮಂಗಳಪುರದ ತಾಪಂ ಮಾಜಿ ಸದಸ್ಯ ನಾಗರಾಜ್ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಜೆಡಿಎಸ್ ಅವಕಾಶವಾದಿ ರಾಜಕಾರಣ ಮಾಡುತ್ತದೆ.ಉಪಚುನಾವನೆಯಲ್ಲಿ ಜೆಡಿಎಸ್ ಗಳಿಸಿರುವ ಮತಗಳನ್ನು ಗಮನಿಸಿದರೆ ಎರಡು ಪಕ್ಷಗಳ ನಡುವೆ ಒಳ ಒಪ್ಪಂದ ನಡೆದಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಹೇಳಿದ್ದಾರೆ.
ಉಪಚುನಾವಣೆಯಲ್ಲಿ ಸೋಲಿನ ಕುರಿತು ಉಲ್ಲೇಖಿಸಿದ ಸಿದ್ದರಾಮಯ್ಯ, ಉಪಚುನಾವಣೆಗಳು ಭವಿಷ್ಯದ ರಾಜಕಾರಣದ ದಿಕ್ಸೂಚಿಯಲ್ಲ. ಬಿ.ವೈ.ವಿಜಯೇಂದ್ರ ಹಾಗೂ ಮುನಿರತ್ನ ಅವರ ಹಣ ಚುನಾವಣೆಯಲ್ಲಿ ಕೆಲಸ ಮಾಡಿದೆ ಆದ್ದರಿಂದಲೇ ಫಲಿತಾಂಶ ವ್ಯತಿರಿಕ್ತವಾಗಿದೆ ಎಂದು ಹೇಳಿದ್ದಾರೆ.