ಬೆಂಗಳೂರು(28-10-2020): “ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗೆಳೆದಿದ್ದಾರೆ. ಹಾಗಾದರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ?” ಎಂದು ಸಿದ್ಧರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.
ಕಾಂಗ್ರೆಸಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ, ಅದು ಪಕ್ಷಕ್ಕೆ ಬಹುಮತ ಬಂದ ಬಳಿಕ ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಅವರು, ಶಿರಾದಲ್ಲಿ ಬಿಜೆಪಿ ನಾಯಕರು ಚುನಾವಣೆ ಗೆಲ್ಲಲು ಹಣ ಚೆಲ್ಲುತ್ತಿದ್ದಾರೆಂದು ಆರೋಪಿಸಿದರು.
ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯಥಿಗೆ ಸೋಲಿನ ಭಯವಿದೆ. ಹೀಗಾಗಿ ಅಲ್ಲಿ ಆತ ಗಲಾಟೆ ಮಾಡಿಸುತ್ತಿದ್ದಾನೆ. ಅಲ್ಲಿನ ಇನ್ಸಪೆಕ್ಟರ್ ಮನಿರತ್ನ ಪರ ಇದ್ದಾನೆ. ಹಾಗಾಗಿ ಅಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ ಎಂದರು. ನಾಡಿದ್ದು ರಾಜೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇವೆ ಎಂದೂ ಹೇಳಿದರು.