ಗೋಡ್ಸೆಯನ್ನು ಆರಾಧಿಸುವವರು ಹೆಚ್ಚಾಗಿದ್ದಾರೆ| ಹುತಾತ್ಮರ ದಿನಾಚರಣೆಯಲ್ಲಿ ಸಿದ್ದರಾಮಯ್ಯ ಮಹತ್ವದ ಭಾಷಣ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(30-01-2021): ಗಾಂಧೀಜಿಯನ್ನು ಹತ್ಯೆ ಮಾಡಿದ ಕೊಲೆಗಡುಕನನ್ನು ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗಿದ್ದಾರೆ. ಗೋಡ್ಸೆ ಈಗ ನಮಗೆ ದೇಶಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ  ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದ ಅವರು ಗಾಂಧೀಜಿ ಸಮಾಜ ಸುಧಾರಕರಾಗಿದ್ದರು. ಪ್ರೀತಿ, ಸೋದರತೆ, ಅನುಕಂಪ, ಸತ್ಯ ಮತ್ತು ಅಹಿಂಸೆ ಎಂಬ ಪಂಚ ಸೂತ್ರಗಳ ಮೇಲೆ ತಮ್ಮ ಜೀವನ ಪಯಣ ನಡೆಸಿದ ಗಾಂಧೀಜಿ ಮಹಾನ್ ಸಮಾಜ ಪರಿವರ್ತಕ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾತ್ಮಗಾಂಧೀಜಿಯವರು ಹುತಾತ್ಮರಾದ ದಿನವನ್ನು ನಾವು ಹುತಾತ್ಮರ ದಿನವಾಗಿ ಆಚರಿಸುತ್ತಿದ್ದೇವೆ. ಈ ಮೂಲಕ ಸ್ವಾತಂತ್ರ್ಯಹೋರಾಟಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸಾವಿರಾರು ದೇಶಭಕ್ತರಿಗೆ ಗೌರವವನ್ನು ಅರ್ಪಿಸುತ್ತಿದ್ದೇವೆ. ಇವರಲ್ಲಿ ಬಹಳಷ್ಟು ಹುತಾತ್ಮರು ಅನಾಮಿಕರಾಗಿಯೇ ಉಳಿದಿದ್ದಾರೆ ಎಂದು ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು