ಮೈಸೂರು(20-02-2021):ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ದೇಣಿಗೆ ನೀಡುವ ವಿಚಾರದಲ್ಲಿ ಸಿದ್ದರಾಮಯ್ಯ ನಿಡಿರುವ ಹೇಳಿಕೆಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ ತನ್ನ ತವರೂರಿನಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳಿಕೆಯನ್ನು ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತೇನೆ. ಎಷ್ಟು ವೆಚ್ಚ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ. ರಾಮ ಜನರ ಧಾರ್ಮಿಕ ನಂಬಿಕೆ, ಜನರು ಎಲ್ಲಾ ಕಡೆ ರಾಮ ಮಂದಿರವನ್ನು ಕಟ್ಟುತ್ತಾರೆ ಎದರಲ್ಲಿ ವಿಶೇಷ ಏನಿದೆ ಎಂದು ಪ್ರಶ್ನಿಸಿದ್ದಾರೆ.
ಮಾತನ್ನು ಮುಂದುವರಿಸಿದ ಸಿದ್ದರಾಮಯ್ಯ, ಇತ್ತೀಚೆಗೆ ಮಾದ್ಯಮದವರು ನನ್ನನ್ನು ಹೆಚ್ಚು ಟೀಕಿಸುತ್ತಾರೆ. ಟೀಕೆ ಮಾಡಿಲ್ಲ ಅಂದ್ರೆ ಅವರಿಗೆ ನಿದ್ದೆ ಬರುವುದಿಲ್ಲ. ಟೀಕೆಯನ್ನು ನಾನು ಸ್ವಾಗತಿಸುತ್ತೇನೆ. ಅಭಿವ್ಯಕ್ತಿಗೆ ಸ್ವಾತಂತ್ರ್ಯ ಇರಬೇಕು. ಸರ್ವಾಧಿಕಾರ ಇರಬಾರದು ಎಂದು ಹೇಳಿದ್ದಾರೆ.