ಜಿಲಿಟಿನ್ ಸ್ಪೋಟದಲ್ಲಿ ಕಾರ್ಮಿಕರ ದುರ್ಮರಣ: ಅಕ್ರಮ ಗಣಿಗಾರಿಕೆ ಬಗ್ಗೆ ಸಿದ್ದರಾಮಯ್ಯ ಗಂಭೀರ ಆರೋಪ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(23-02-2021): ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗೇವಲ್ಲಿಯ ಕಲ್ಲು ಗಣಿಗಾರಿಕೆಯಲ್ಲಿ ಸಂಭವಿಸಿದ ಜಿಲಿಟಿನ್ ಸ್ಪೋಟದಲ್ಲಿ ಆರು ಜನ ಮೃತಪಟ್ಟಿದ್ದು,ಈ ಬಗ್ಗೆ ರಾಜ್ಯ ಸರಕಾರ ಈಗಾಗಲೇ ಸಿಐಡಿ ತನಿಖೆಗೆ ಆದೇಶವನ್ನು ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಘಟನೆಯ ಬಗ್ಗೆ ಸಂತಾಪವನ್ನು ಸೂಚಿಸಿ  ರಾಜ್ಯ ಸರಕಾರದ ಬಗ್ಗೆ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ದುರಂತ ನಡೆದಿದೆ. ಕಲ್ಲು ಕ್ವಾರಿಯಲ್ಲಿ ಆರು ‌ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಎಂದು ಹೇಳಿದ್ದಾರೆ.

ಘಟನೆಯಲ್ಲಿ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮ, ಭ್ರಷ್ಟತೆ ಎದ್ದು ಕಾಣುತ್ತಿದೆ. ಅಕ್ರಮದಲ್ಲಿ ಸರಕಾರ ಸಾಮೀಲಾಗಿದೆ ಎನ್ನುವುದು ಬಹಿರಂಗವಾಗಿದೆ. ಮುಖ್ಯಮಂತ್ರಿಯವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು