ಬೆಂಗಳೂರು(27/10/2020): ಮುಖ್ಯಮಂತ್ರಿಯವರ ಮಗ, ಮೊಮ್ಮಗ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.
ರಾಜರಾಜೇಶ್ವರಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಕುಸುಮಾ ಅವರ ಪರವಾಗಿ ಮತಯಾಚನೆ ಮಾಡುತ್ತಾ ಅವರು ಸುದ್ದಿಗಾರರ ಜೊತೆಗೆ ಮಾತನಾಡುತ್ತಿದ್ದರು. ಮುಖ್ಯಮಂತ್ರಿಯವರ ಪುತ್ರ, ಮೊಮ್ಮಗ ಜೆಸಿಬಿಯಲ್ಲಿ ಹಣ ದೋಚುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಈ ಕ್ಷೇತ್ರದಲ್ಲಿ ಅಪರಾಧ ಪ್ರಕರಣಗಳು ಹಾಗೂ ಮಹಿಳಾ ದೌರ್ಜನ್ಯಗಳು ಕೊನೆಗೊಳ್ಳಬೇಕಾದರೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗೆ ಮತ ಹಾಕಬೇಕೆಂದು ಅವರು ಹೇಳಿದರು.