ಉತ್ತರಕೊಡಿ ಬಿಎಸ್ ವೈ: ಟ್ವಿಟ್ಟರ್ ನಲ್ಲಿ ಹೊಸ ಅಭಿಯಾನ ಶುರು ಮಾಡಿದ ಸಿದ್ದರಾಮಯ್ಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಬೆಂಗಳೂರು(02/11/2020): ಕಳೆದ ವರ್ಷ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ ಎಂದು‌ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಉತ್ತರಕೊಡಿ ಬಿಎಸ್ ವೈ ಎಂಬ ಹೊಸ ಟ್ವಿಟ್ಟರ್ ಅಭಿಯಾನ ಶುರು ಮಾಡಿರುವ ಅವರು; ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ ₹ 90,000 ಕೋಟಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಯಿತಾ ಎಂದು ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಸರ್ಕಾರ ನಡೆಸಿದ್ದ ಸಮೀಕ್ಷೆಯಂತೆ ನೆರೆಯಿಂದಾಗಿ ಹಾನಿಗೀಡಾದ ಮನೆಗಳು 2,24,000. ಪರಿಹಾರ ನೀಡಿರುವುದು 1,24,000 ಮನೆಗಳಿಗೆ ಮಾತ್ರ ಎಂದು ಕೇಂದ್ರಕ್ಕೆ ವರದಿ ಕಳಿಸಲಾಗಿದೆ. ಇನ್ನು ಈ ವರ್ಷದ ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಸರ್ಕಾರ ಪರಿಹಾರ ನೀಡುವುದು ಯಾವಾಗ? ಎಂದಿದ್ದಾರೆ.

ಕಳೆದ ವರ್ಷ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರ್ಕಾರ ಕೇಂದ್ರದಿಂದ ಪರಿಹಾರ ಕೇಳಿದ್ದು ₹ 35,000 ಕೋಟಿ, ಅವರು ನೀಡಿದ್ದು ₹ 1654 ಕೋಟಿ. ಈ ಬಾರಿ ರಾಜ್ಯ ಸರ್ಕಾರ ಈ ವರೆಗೆ ಕೇಳಿದ್ದು ₹ 4000 ಕೋಟಿ. ಕೇಂದ್ರದಿಂದ ಸಮರ್ಪಕ ಪರಿಹಾರ ಕೇಳಲೂ ನಿಮಗೆ ಭಯನಾ?. ಆಗಸ್ಟ್‌ನಿಂದ ಮೂರು ತಿಂಗಳು ಸುರಿದ ಮಳೆಯಿಂದಾಗಿ 23 ಜಿಲ್ಲೆಗಳ 130 ತಾಲ್ಲೂಕುಗಳು ಬಾಧಿತವಾಗಿವೆ. ಕಳೆದ ವರ್ಷ ಹತ್ತು ಲಕ್ಷ ಹೆಕ್ಟೇರ್ ಕೃಷಿಭೂಮಿ ಹಾನಿಗೀಡಾಗಿದ್ದರೆ, ಈ ವರ್ಷ 11 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಈ ದುಪ್ಪಟ್ಟು ನಷ್ಟದಿಂದ ರೈತರು ನೆಲಹಿಡಿದಿದ್ದಾರೆ ಎಂದು ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು