ಬೆಂಗಳೂರು 22/10/2020 : ಸಿದ್ಧರಾಮಯ್ಯ ಉಗುರು, ಹಲ್ಲು ಇಲ್ಲದ ಹುಲಿ ಎಂದು ಬಿಜೆಪಿ ಟೀಕಿಸಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ‘ಕಾಡು ಮನುಷ್ಯ’ ಎಂದು ಕರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ‘ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ’ ಎಂದು ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದೆ.