ಬೆಂಗಳೂರು(25/10/2020); ಬಿಜೆಪಿ ಸಂಸದರಿಗೆ ಧಮ್ ಇದ್ದರೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ನೆರೆ ಪರಿಹಾರವನ್ನು ತಂದು ತೋರಿಸಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರು ಸವಾಲು ಹಾಕಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ ಇಪ್ಪತ್ತೈದು ಸಂಸದರಿದ್ದಾರೆ. ಆದರೆ, ಅವರಿಂದ ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಿಲ್ಲ ಎಂದು ಕಿಡಿಕಾರಿದರು.